Wednesday, November 29, 2023

Latest Posts

SHOCKING | ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಈವರೆಗೂ ಅದ್ಭುತ ಪ್ರದರ್ಶನ ನೀಡಿದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಟೀಂ ಇಂಡಿಯಾ ಸೆಮೀಸ್ ತಲುಪಿದ್ದು, ಇದೀಗ ಪಂದ್ಯಕ್ಕೆ ಇಂಜುರಿ ಕಾರಣದಿಂದ ಪಾಂಡ್ಯ ಲಭ್ಯವಿರುವುದಿಲ್ಲ. ಪಾಂಡ್ಯ ಜಾಗಕ್ಕೆ ಪ್ರಸಿದ್ಧ ಕೃಷ್ಣ ಅವರನ್ನು ಬದಲಿ ಆಟಗಾರರನ್ನಾಗಿ ನೇಮಿಸಲಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ಎಡಗಾಲಿಗೆ ನೋವಾಗಿತ್ತು, ಸ್ಕ್ಯಾನಿಂಗ್ ಮಾಡಿಸಿದ ನಂತರ ಟೀಂಗೆ ವಾಪಾಸಾಗುತ್ತಾರೆ ಎಂದು ಹೇಳಲಾಗಿತ್ತು. ವೈದ್ಯಕೀಯ ಕಾರಣಗಳಿಂದ ಪಾಂಡ್ಯ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!