ಡಿವೋರ್ಸ್ ವದಂತಿ ಬೆನ್ನಲ್ಲೇ ನಟ ಜೊತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಆಟಗಾರ ​ಹಾರ್ದಿಕ್‌ ಪಾಂಡ್ಯ ವಿಚ್ಛೇದನ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಇದರ ನಡುವೆ ಈ ಸುದ್ದಿಗೆ ಪುಷ್ಠೀ ನಿಡುವಂತೆ ದಿಶಾ ಪಟಾನಿಯ ಆಪ್ತ ಸ್ನೇಹಿತ ಅಲೆಕ್ಸಾಂಡರ್ ಅಲೆಕ್ಸ್ ಜೊತೆ ಹಾರ್ದಿಕ್‌ ಪಾಂಡ್ಯ ಪತ್ನಿ ನತಾಶಾ ಕಾಣಿಸಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಇದೀಗ ಇವರಿಬ್ಬರ ನಡುವಿನ ಗೆಳೆತನ ಪಾಂಡ್ಯ ಜೊತೆಗೆ ಡಿವೋರ್ಸ್ಗೆ ಕಾರಣವಾಗಿರಬಹುದು ಎಂದು ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿದೆ.

ಪ್ರತೀ ಮ್ಯಾಚ್​​​ ಸಮಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ನತಾಶಾ, ಈ ಬಾರಿ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ​ ಯಾವುದೇ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿರಲಿಲ್ಲ. ಇದೀಗ ಮತ್ತೊಬ್ಬನೊಂದಿಗೆ ಕಾಣಿಸಿಕೊಂಡಿದ್ದು, ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂದು ವದಂತಿಗಳು ಹರಿದಾಡುತ್ತಿದೆ.

ಡಿವೋರ್ಸ್‌ ಗಾಸಿಪ್‌ ಎಲ್ಲೆಡೆ ಹರಿದಾಡುತ್ತಿದ್ದರೂ ಕೂಡ ಈ ವಿಷಯದ ಬಗ್ಗೆ ಹಾರ್ದಿಕ್​​ ಪಾಂಡ್ಯ ಹಾಗೂ ಪತ್ನಿ ನತಾಶಾ ಈವರೆಗೆ ಎಲ್ಲಿಯೂ ಕೂಡ ಏನನ್ನೂ ಹೇಳಿಕೊಂಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!