Sunday, July 3, 2022

Latest Posts

ಕಾಂಗ್ರೆಸ್‌ಗೆ ಹಾರ್ದಿಕ್‌ ಪಟೇಲ್‌ ಗುಡ್‌ ಬೈ : ನಾಯಕತ್ವದಲ್ಲಿ ಗಂಭೀರತೆಯ ಕೊರತೆಯಿದೆ.

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಗುಜರಾತ್ ನ ಪಾಟೀದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಟ್ವೀಟರ್‌ ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿರುವ ಪಟೇಲ್‌ “ನಾನು ಕಾಂಗ್ರೆಸ್ ಪಕ್ಷದ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಈ ಹೆಜ್ಜೆಯ ನಂತರ, ನಾನು ಗುಜರಾತ್‌ನಲ್ಲಿ ನಿಜವಾಗಿಯೂ ಧನಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಪಟೇಲ್, “ಕಾಂಗ್ರೆಸ್ ಅನ್ನು ಸರಿಯಾದ ದಿಕ್ಕಿನಲ್ಲಿ ನಡೆಸಲು ಹಲವಾರು ಪ್ರಯತ್ನಗಳ ಹೊರತಾಗಿಯೂ, ಪಕ್ಷವು ನಿರಂತರವಾಗಿ ನನ್ನ ದೇಶ ಮತ್ತು ನಮ್ಮ ಸಮಾಜದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ” ಎಂದು ಬರೆದಿದ್ದಾರೆ.
ಕಾಂಗ್ರೆಸ್ ನ ಹಿರಿಯ ನಾಯಕತ್ವದಲ್ಲಿ “ಗಂಭೀರತೆಯ ಕೊರತೆ”ಯನ್ನು ಎತ್ತಿ ತೋರಿಸಿರುವ ಪಟೇಲ್ ತಮ್ಮ ವೈಯುಕ್ತಿಕ ಹಣಕಾಸಿನ ಲಾಭ ಕ್ಕಾಗಿ ಗುಜರಾತ್‌ ಕಾಂಗ್ರೆಸ್‌ ಪ್ರಮುಖ ಸಾಮಾಜಿಕ ಸಮಸ್ಯೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss