ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಕುಶಾಲನಗರ:
ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಪರಿಣಾಮವಾಗಿ ಜಲಾಶಯದಿಂದ ಸುಮಾರು 6500ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕಳೆದ 20 ದಿನಗಳಿಂದ ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿತ್ತು. ಅದರೆ ಇದೀಗ ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯದ ಒಳಹರಿವು ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಸುಮಾರು 6500 ಕ್ಯುಸೆಕ್ ನೀರನ್ನು ವಿದ್ಯುತ್ ಉತ್ಪಾದನಾ ಘಟಕದ ಮೂಲಕ ನದಿಗೆ ಹರಿಸಲಾಗುತ್ತಿದೆ.
ಹಾರಂಗಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ಭದ್ರತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನುನದಿಗೆ ಹರಿಸುವಂತೆ ಶಾಸಕ ಎಂ.ಪೊ.ಅಪ್ಪಚ್ಚುರಂಜನ್ ಅವರು ಸಂಬಂಧಿಸಿದವರಿಗೆ ಸೂಚನೆ ನೀಡ್ಡಿದ್ದು, ಅದರಂತೆ ಹೆಚ್ಚುವರಿಯಾದ ನೀರನ್ನು ವಿದ್ಯುತ್ ಘಟಕದ ಮೂಲಕ ಹರಿಸಲಾಗುತ್ತಿದೆ ಎಂದು ನೀರಾವರಿ ಇಲಾಖೆಯ ಹಾರಂಗಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.