Thursday, July 7, 2022

Latest Posts

ಚಾಮರಾಜನಗರ ಘಟನೆ: ಸರಕಾರದ ವೈಫಲ್ಯಕ್ಕೆ ಕೈಗನ್ನಡಿ ಎಂದ ಹರೀಶ್ ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ವರದಿ, ಮಂಗಳೂರು:

ಕೋವಿಡ್-19 ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವೈಫಲ್ಯವಾಗಿರುವುದಕ್ಕೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24ಮಂದಿ ರೋಗಿಗಳು ಸಾವನ್ನಪ್ಪಿರುವುದು ಕೈಗನ್ನಡಿ. ಇದೊಂದು ದುರಂತ ಹಾಗೂ ನಾಚಿಕೆಗೇಡಿನ ಸಂಗತಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಬಗ್ಗೆ ಡಿಸೆಂಬರ್‌ನಲ್ಲೇ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮೂಲಸೌಕರ್ಯ ಒದಗಿಸಬೇಕಿತ್ತು. ಆದರೆ ಆಡಳಿತದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೋವಿಡ್ ಗಣನೀಯವಾಗಿ ಏರಿಕೆಯಾಗಿದ್ದು, ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಕಾಡುತ್ತಿದೆ. ಚಾಮರಾಜನಗದಲ್ಲಿ ಒಂದೇ ದಿನ 24ಮಂದಿ ಆಕ್ಸಿಜನ್ ಸಿಗದೆ ಮೃತಪಟ್ಟಿರುವುದು ಬೇಸರದ ಸಂಗತಿ. ಕೂಡಲೇ ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸಮಸ್ಯೆ ಎದುರಾಗಿದೆ. ಇದೇ ರೀತಿ ಮುಂದುವರಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಂಗಳೂರು, ಚಾಮರಾಜನಗರ ಪರಿಸ್ಥಿತಿ ಬರಬಹುದು. ಜಿಲ್ಲಾಡಳಿತ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಮಾಡಬೇಕು. ಜನರ ಸಂಕಷ್ಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸವನ್ನು ಆಡಳಿತ ಮಾಡಲಿ ಎಂದು ಪ್ರಕಟಣೆಯಲ್ಲಿ ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss