ಹ್ಯಾರಿ ಬ್ರೂಕ್​ ಶತಕದ ಆಟ: ಕೋಲ್ಕತಾ ಗೆಲುವಿಗೆ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹ್ಯಾರಿ ಬ್ರೂಕ್​ (ಅಜೇಯ 100) ಅಮೋಘ ಶತಕದ ಸನ್​ ರೈಸರ್ಸ್ ಹೈದರಾಬಾದ್ ತಂಡ 228 ರನ್​ಗಳ ಬೃಹತ್​ ಮೊತ್ತ ಪೇರಿಸಿದೆ.
ನಾಯಕ ಏಡೆನ್​ ಮಾರ್ಕ್ರಮ್​ (50) ಕೂಡ ಅಬ್ಬರದ ಅರ್ಧ ಶತಕ ಬಾರಿಸಿ ಮಿಂಚಿದರು.
ಈಡನ್​ ಗಾರ್ಡನ್ಸ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಮೊದಲು ಬ್ಯಾಟಿಂಗ್​ಗೆ ಅವಕಾಶ ಪಡೆದ ಎಸ್​ಆರ್​ಎಚ್​ ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಎದುರಾಳಿ ತಂಡದ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು.
ಹ್ಯಾರಿ ಬ್ರೂಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನಕ್ಕೆ ಕೆಕೆಆರ್ ಬೆಚ್ಚಿ ಬಿದ್ದಿದೆ. ಬ್ರೂಕ್ 55 ಎಸೆತದಲ್ಲಿ 3 ಸಿಕ್ಸರ್ ಹಾಗೂ 12 ಬೌಂಡರಿ ಮೂಲಕ ಅಜೇಯ 100 ರನ್ ಸಿಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!