ಹೊಸದಿಗಂತ ವರದಿ, ಮಂಗಳೂರು:
ಕ್ಯಾಲೆಂಡರ್ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದೆಗೆಡದಂತೆ ನೋಡಿಕೊಳ್ಳಲು ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದ್ದು, ನಾಗರಿಕರಿಗೆ ಕೆಲವೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.
- ಡಿ. 31 ರ ಮಧ್ಯರಾತ್ರಿ 12.30ರ ಒಳಗೆ ಎಲ್ಲಾ ರೀತಿಯ ಹೊಸ ವರ್ಷಾಚರಣೆಯ ಕಾರ್ಯಕ್ರಮ ಮುಕ್ತಾಯವಾಗಬೇಕು.
- ಪಬ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮುಂತಾದ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನೋಡಿಕೊಳ್ಳಬೇಕು.
- ಹೋಟೆಲ್, ಪಬ್, ರೆಸ್ಟೋರೆಂಟ್, ಹೋಮ್ ಸ್ಟೇ, ಪಿಜಿಗಳಲ್ಲಿ ಸಾರ್ವಜನಿಕರಿಗೆ ಈವೆಂಟ್‌ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡತಕ್ಕದ್ದು.
- ಕಾರ್ಯಕ್ರಮಗಳ ಆಯೋಜಕರು, ಭದ್ರತಾ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸ್ವಯಂಸೇವಕರು, ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು.
- ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥಾವ ಮದ್ಯದ ನಶೆಯಲ್ಲಿ ಆಚರಣೆ ಮಾಡಿದಲ್ಲಿ ಕಠಿಣ ಕ್ರಮ.
- ಬಸ್ ಸ್ಟಾಂಡ್, ಸಮುದ್ರ ತೀರ, ರಸ್ತೆ ಫುಟ್ ಪಾತ್, ಗಾರ್ಡನ್ ಮತ್ತು ಇತರೇ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.
ನಾಗರಿಕರು ಈ ನಿಯಮಗಳನ್ನು ಪಾಲಿಸಬೇಕು. ಕಾನೂನು ಉಲ್ಲಂಘಿಸಿ ಶಾಂತಿ ಕದಡುವ ಯಾವುದೇ ಪ್ರಯತ್ನ ನಡೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ ಪಿ ಡಾಕ್ಟರ್ ಅರುಣ್ ಹೇಳಿದ್ದಾರೆ.