ಹರ್ಷ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ, ಅಥಣಿ

ಭಾರತದಲ್ಲಿ ಲವ್ ಜಿಹಾದ್ ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸರ್ಕಾರ ಇವುಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸದಿದ್ದರೆ ನಾವು ಮುಂದೊಂದು ದಿನ ಹಿಂದು ಜಿಹಾದ್ ಪ್ರಾರಂಭ ಮಾಡಬೇಕಾಗುತ್ತದೆ ಎಂದು ಅರ್.ಎಸ್.ಎಸ್ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಎಚ್ಚರಿಕೆ ನೀಡಿದರು.

ಭಜರಂಗದಳದ ಹಿಂದು ಕಾರ್ಯಕರ್ತ ಶಿವಮೊಗ್ಗದ ಹರ್ಷನನ್ನು ಬರ್ಬರವಾಗಿ ಹತ್ಯೇ ಖಂಡಿಸಿ, ಅಥಣಿ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಬಜರಂಗದಳ ಸಂಘಟನೆಗಳು ಜೊತೆಯಾಗಿ ಶಿವಾಜಿ ಸರ್ಕಲ್ ನಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ನಂತರ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ರಾಜ್ಯ ಸರ್ಕಾರಕ್ಕೆ ವಿವಿಧ ಹಿಂದೂಪರ ಸಂಘಟನೆಗಳು ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿದ ಅವರು, ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪೊಲೀಸರು ಬರೋವರೆಗೂ ನೀವು ಕಾಯಬೇಡಿ ಅವರಿಗೆ ಸರಿಯಾಗಿ ಉತ್ತರ ಕೊಡಿ. ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಕೊಲೆ ಅವ್ಯಾಹತವಾಗಿ ನಡೆಯುತ್ತಿತ್ತು. ನಾವು ಆಗ ಅವರ ಭಾಷೆಯಲ್ಲಿಯೇ ಉತ್ತರ ಕೊಟ್ಟೆವು. ಆಗ ಅವರೇ ನಮ್ಮ ಬಳಿ ಸಂಧಾನಕ್ಕೆ ಬಂದರು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ರೈತಮುಖಂಡ ರಾಜಕುಮಾರ್ ಜಂಬಿಗಿಸೇರಿ ವಿವಿಧ ಹಿಂದು ಪರ ಸಂಘಟನೆಯ ಮುಖಂಡರು,ಕಾರ್ಯಕರ್ತರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!