ಹರ್ಷ ಹತ್ಯೆ ಪ್ರಕರಣ: ಎನ್ ಐಎ ತನಿಖೆಗೆ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹ

ಹೊಸದಿಗಂತ ವರದಿ, ಶಿವಮೊಗ್ಗ:

ಬಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣವನ್ನು ಎನ್ ಐಎ ( ರಾಷ್ಟ್ರೀಯ ತನಿಖಾ ದಳ) ಗೆ ವಹಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃತ್ಯವು ಪೂರ್ವ ನಿಯೊಜಿತವಾಗಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇನ್ನೂ ಯಾರಿದ್ದಾರೆಂದು ಸಮಗ್ರ ತನಿಖೆ ಆಗಬೇಕಿದೆ. ಆ ನಿಟ್ಟಿನಲ್ಲಿ ಎನ್ ಐಎಗೆ ವಹಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡುವುದಾಗಿ ತಿಳಿಸಿದರು.
ಹೊರಗಿನಿಂದ ಬಂದು ಹತ್ಯೆ ಮಾಡಿ ಪರಾರಿಯಾಗಿರುವುದು ಗೊತ್ತಾಗಿದೆ. ಹಂತಕರಿಗೆ ಹೊರ ರಾಜ್ಯ, ಹೊರ ದೇಶದ ಸಂಪರ್ಕ ಇರುವುದು ಮೇಲ್ನೋಟಕ್ಕೆ ಗೊತ್ತಾಗಿತ್ತಿದೆ. ಇದರಿಂದಾಗಿ ಈ ಕೊಲೆ ಷಡ್ಯಂತ್ರದ ಹಿಂದೆ ಯಾರಿದ್ದಾರೆಂದು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವೇ ಸೂಕ್ತ ವೆಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!