ದಲಿತ ಯುವಕನ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ಶತಸ್ಸಿದ್ಧ: ಮುರುಗೇಶ್‌ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕಲಬುರಗಿಯಲ್ಲಿ ಮುಸ್ಲಿಂ ಯುವತಿಯೋರ್ವಳನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ಧಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೋಲೀಸರು ಕಾನೂನಿನ ರೀತಿಯಲ್ಲಿಯೇ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದು ಕಠಿಣ ಕ್ರಮ ಜರುಗಿಸಲಾಗುತ್ತದೆ” ಎಂದಿದ್ದಾರೆ.

“ಕಾಂಗ್ರೆಸ್‌ ಮತ್ತು ಜೆಡಿಎಸ್  ಇದನ್ನೇ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನೋವು ತಿಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತದೆ” ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!