ಹರ್ಷ ಕೊಲೆ ಪ್ರಕರಣ: ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಬೆನಗಳೂರು ನಗರದ ವಿಶೇಷ ನ್ಯಾಯಾಲಯವು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸಿದೆ.
ಈ ಕುರಿತಂತೆ ಎನ್‌ಐಎ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಬಿ.ಜಿ. ಪ್ರಮೋದ್‌ ಬುಧವಾರ ವಿಚಾರಣೆ ನಡೆಸಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಲು ಆದೇಶಿಸಿದ್ದಾರೆ.
ಆರೋಪಿಗಳಾದ ಶಿವಮೊಗ್ಗದ ಟ್ಯಾಂಕ್‌ ಮೊಹಲ್ಲಾದ ಅಬ್ದುಲ್‌ ಆಫ್ವಾನ್‌ (21), ಅಬ್ದುಲ್‌ ಖಾದರ್ ಜಿಲಾನ್‌ (25), ಇಲ್ಯಾಸ್‌ ನಗರದ ಫರಜ್‌ ಪಾಷಾ (24), ಜೆ.ಪಿ ನಗರದ ಸೈಯದ್‌ ನದೀಂ (20) ಮತ್ತು ಜಾಫರ್ ಸಾದಿಕ್‌ (50) ಅವರನ್ನು ಮೇ 9ರ ಮಧ್ಯಾಹ್ನದವರೆಗೆ ಎನ್‌ಐಎ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
2022ರ ಫೆಬ್ರುವರಿ 20ರಂದು ರಾತ್ರಿ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ನಡೆದಿತ್ತು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!