ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರ್ಷ ಹತ್ಯೆ ಪ್ರಕರಣದಲ್ಲಿ ಇದುವರೆಗೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಆರೋಪಿಗಳಿಗೆ14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಈ ಕುರಿತಂತೆ ಇಂದು ಪ್ರಕರಣದ ವಿಚಾರಣೆಯನ್ನು ನಡೆಸಿದ ಶಿವಮೊಗ್ಗ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯ ಆರೋಪಿಗಳಾದಂತ ರಿಹಾನ್ ಶರೀಫ್, ಆಸಿಫ್ ಉಲ್ಲಾಖಾನ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿದೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ 6 ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಮೂಲಕ ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.