ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಫೆ.26 ರವರೆಗೆ ಕರ್ಫ್ಯೂ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮಾ.26 ರವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ.

ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಎಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇನ್ನೆರಡು ದಿನ 144 ಸೆಕ್ಷನ್ ಹಾಗೂ ಕರ್ಫ್ಯೂ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಗಲಭೆ ನಡೆದ ಹಳೆ ಶಿವಮೊಗ್ಗ ಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!