ಹರ್ಷ ಹತ್ಯೆ ಪ್ರಕರಣ: ಶಾಸಕಿ ರೂಪಾಲಿ ನಾಯ್ಕ ಖಂಡನೆ

ಹೊಸದಿಗಂತ ವರದಿ,ಅಂಕೋಲಾ:

ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಕಾರವಾರ ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಶಾಸಕಿ ರೂಪಾಲಿ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಆರೋಪಿಗಳ ಪತ್ತೆಗೆ ಅಗತ್ಯ ಕ್ರಮ ಕೈಗೊಂಡಿದ್ದು, ಆರೋಪಿಗಳು ಯಾರೇ ಆಗಿದ್ದರೂ ತಕ್ಕ ಶಿಕ್ಷೆಯಾಗಬೇಕು.
ಇಂತಹ ಘಟನೆ ಮರುಕಳಿಸದಂತೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಎಚ್ಚರಿಕೆ ಸಂದೇಶ ರವಾನಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು
ಭಗವಂತ ಮೃತ ಯುವಕನ ಆತ್ಮಕ್ಕೆ ಸದ್ಗತಿ ನೀಡಿ, ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!