March 5, 2026
Thursday, March 5, 2026
spot_img

ಟಿ20 ವಿಶ್ವಕಪ್ ನಿಂದ ಹರ್ಷಿತ್ ರಾಣಾ ಔಟ್: ಈ ವೇಗಿಗೆ ಒಲಿದ ಜಾಕ್ ಪಾಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಈ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ಎಂಬಂತೆ ಪಂದ್ಯಕ್ಕೂ ಮುನ್ನವೇ ತಂಡದ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಗಾಯದಿಂದಾಗಿ ಹೊರಬಿದ್ದಿದ್ದಾರೆ. ಹೀಗಾಗಿ ಬಿಸಿಸಿಐ ಕೂಡ ಅವರ ಬದಲಿಯಾಗಿ ಅನುಭವಿ ವೇಗಿಯನ್ನು ತಂಡಕ್ಕೆ ಕರೆತಂದಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಹರ್ಷಿತ್ ರಾಣಾ ಗಾಯಕ್ಕೆ ತುತ್ತಾದರು. ಹೀಗಾಗಿ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಹೊರಗಿಟ್ಟು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ .

ಈ ವಿಷಯದ ಬಗ್ಗೆ ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ಪಂದ್ಯಕ್ಕೆ ಒಂದು ದಿನದ ಮೊದಲು ಪತ್ರಿಕಾಗೋಷ್ಠಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್, ಹರ್ಷಿತ್ ಪ್ರಸ್ತುತ ಪಂದ್ಯಾವಳಿಯಿಂದ ಹೊರಗುಳಿದಿಲ್ಲ ಎಂದು ಸ್ಪಷ್ಟಪಡಿಸಿದರಾದರೂ, ಹರ್ಷಿತ್ ಫಿಟ್ ಇಲ್ಲ ಎಂಬುದನ್ನು ಖಚಿತಪಡಿಸಿದ್ದರು.

ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಟಿ20 ತಂಡದಿಂದ ಹೊರಗುಳಿದಿದ್ದ ಸಿರಾಜ್, ಜುಲೈ 2024 ರಲ್ಲಿ ಶ್ರೀಲಂಕಾ ಪ್ರವಾಸದಲ್ಲಿ ಕೊನೆಯ ಬಾರಿಗೆ ಈ ಸ್ವರೂಪದಲ್ಲಿ ಭಾರತ ಪರ ಆಡಿದ್ದರು. ಒಟ್ಟಾರೆಯಾಗಿ, ಸಿರಾಜ್ ಭಾರತ ಪರ 16 ಟಿ20 ಪಂದ್ಯಗಳನ್ನು ಆಡಿದ್ದು, 14 ವಿಕೆಟ್‌ಗಳನ್ನು ಪಡೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !