ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಸೇರಿ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. 2023ರಲ್ಲಿ ಪಾಕ್‌ಗೆ ಹೋಗಿದ್ದ ಜ್ಯೋತಿ ಪಾಕ್ ಹೈಕಮಿಷನ್ ಉದ್ಯೋಗಿ ಡ್ಯಾನಿಶ್ ಜೊತೆ ನಿಕಟ ಸಂಬಂಧ ಬೆಳೆಸಿದ್ದಳು. ಅಲ್ಲದೇ ಪಾಕ್ ಗುಪ್ತಚರ ಏಜೆಂಟ್‌ಗಳೊಂದಿಗೆ ಸಹ ಸಂಪರ್ಕ ಹೊಂದಿದ್ದಳು.
‘ಟ್ರಾವೆಲ್ ವಿತ್ ಜೋ’ ಯೂಟ್ಯೂಬ್ ನಡೆಸುತ್ತಿದ್ದ ಜ್ಯೋತಿ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಜ್ಯೋತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152 ಮತ್ತು 1923ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3, 4 ಮತ್ತು 5ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಹಿಸಾರ್‌ನ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.