ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ರೆವಾರಿ ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶ ನಿವಾಸಿಗಳಾದ ಅಜಯ್, ವಿಜಯ್, ರಾಮು ಹಾಗೂ ರಾಜೇಶ್ ಮೃತರು.
ಬಾಯ್ಲರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಹಾಗೂ ಇತರರ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದರು. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕೂಲಿ ಕಾರ್ಮಿಕ ರಾಜ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.