ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಲಾಡ್ವಾ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ತಮ್ಮ ಸಮೀಪದ ಕಾಂಗ್ರೆಸ್ ಪ್ರತಿಸ್ಪರ್ಧಿ ಮೇವಾ ಸಿಂಗ್ ವಿರುದ್ಧ 16,054 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಹರಿಯಾಣದ 90 ಸ್ಥಾನಗಳಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.