ಹರಿಯಾಣದ ಚುನಾವಣೆ ಫಲಿತಾಂಶ ದೊಡ್ಡ ಪಾಠ: ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಈ ಚುನಾವಣೆ ಫಲಿತಾಂಶ ದೊಡ್ಡ ಪಾಠ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸಇರಬಾರದು. ಚುನಾವಣೆಯಲ್ಲಿ ಯಾರೊಬ್ಬರೂ ಯಾವತ್ತೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದಕ್ಕೆ ಹರಿಯಾಣದ ಫಲಿತಾಂಶ ದೊಡ್ಡ ಪಾಠ ಎಂದು ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಪ್ರತಿ ಚುನಾವಣೆ ಮತ್ತು ಪ್ರತಿ ಸ್ಥಾನವು ಕಠಿಣವಾಗಿರುತ್ತದೆ ಎಂದು ಹೇಳಿದರು.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಹೆಚ್ಚು ಶ್ರಮಿಸಬೇಕು ಎಂದು ಪಕ್ಷದ ಕೌನ್ಸಿಲರ್‌ಗಳು ಕರೆ ನೀಡಿದ ಕೇಜ್ರಿವಾಲ್ ಅವರು, ತಮ್ಮ ವಾರ್ಡ್‌ಗಳಿಂದ ಕಸವನ್ನು ಸರಿಯಾಗಿ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!