ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದಲ್ಲಿ ಐಪಿಎಸ್ ಅಧಿಕಾರಿ ವೈ. ಪೂರನ್ ಕುಮಾರ್ ಆತ್ಮಹತ್ಯೆ ಪ್ರಕರಣವು ರಾಜ್ಯದ ರಾಜಕೀಯ ಮತ್ತು ಪೊಲೀಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮೊದಲು ಪೂರನ್ ಕುಮಾರ್ ಬರೆದ ಪತ್ರದಲ್ಲಿ, ಉನ್ನತ ಹುದ್ದೆಗಳಲ್ಲಿ ಇರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ತಮ್ಮ ಮರಣೋತ್ತರ ಪರೀಕ್ಷೆ ನಡೆಯಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿತ್ತು. ಈ ಸಂದರ್ಭದಲ್ಲಿ, ಕುಟುಂಬ ಸದಸ್ಯರು ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ್ದರು.
ಪೊಲೀಸ್ ತಿಳಿಸಿದಂತೆ, ಅಮೀತ್ ಪೂರನ್ ಕುಮಾರ್ ತಮ್ಮ ಪತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಡುವುದಕ್ಕೆ ಸಮ್ಮತಿಸಿದ್ದಾರೆ. ಶೀಘ್ರದಲ್ಲೇ ಸರ್ಕಾರಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆ ಸಂಸ್ಥೆಯಲ್ಲಿ ಪೂರನ್ ಕುಮಾರ್ ಮೃತದೇಹವನ್ನು ಪಡೆದು, ಮರಣೋತ್ತರ ಪರೀಕ್ಷೆ ನಡೆಸಲಾಗಲಿದೆ.
ಘಟನೆಯ ಹಿನ್ನೆಲೆ: ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್ ಪೂರನ್ ಕುಮಾರ್ ರನ್ನು ಅವಮಾನ ಮಾಡುತ್ತಿದ್ದರು. ರೋಹಟಕ್ ಎಸ್‌ಪಿ ನರೇಂದ್ರ ಬಿಜಾರಾಣಿಯಾ ಕಿರುಕುಳ ಕೊಡುತ್ತಿದ್ದರು ಜೊತೆಗೆ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದರು ಎಂದು ತಮ್ಮ ಡೆತ್ ನೋಟ್‌ನಲ್ಲಿ ಬರೆದು ಪೂರನ್ ಕುಮಾರ್ ಅ.7ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.