ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಇಂದು ಭೂಕುಸಿತ ಸಂಭವಿಸಿದೆ. ಇದರ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನ ಮಣ್ಣಿನಲ್ಲಿ ಹೂತುಹೋಗಿರುವ ಶಂಕೆ ವ್ಯಕ್ತವಾಗಿದೆ.
ಹರಿಯಾಣದ ಭಿವಾನಿ ಜಿಲ್ಲೆಯ ತೋಷಮ್ ಬ್ಲಾಕ್ ನ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.
ಈ ಬಗ್ಗೆ ತೋಷಮ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಮಾಹಿತಿ ನೀಡಿದ್ದು, ಭೂಕುಸಿತದಿಂದಾಗಿ 6 ಕ್ಕೂ ಹೆಚ್ಚು ಡಂಪರ್ ವಾಹನಗಳು, ಕಾಮಗಾರಿ ಯಂತ್ರಗಳು ಅವಶೇಷಗಳ ಅಡಿ ಹೂತುಹೋಗಿವೆ. ಇದರಿಂದಾಗಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೃಷಿ ಸಚಿವ ಜೆ.ಪಿ. ದಲಾಲ್ ರಕ್ಷಣಾ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು.