ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯ್ ಹಜಾರೆ ಟ್ರೋಫಿ 2023 ರ ಫೈನಲ್ ಪಂದ್ಯದಲ್ಲಿ ರಾಜಸ್ಥಾನವನ್ನು 30 ರನ್ಗಳಿಂದ ಸೋಲಿಸಿದ ಹರಿಯಾಣ ಗೆದ್ದು ಸಂಭ್ರಮಿಸಿದೆ.
ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (ಎಸ್ಸಿಎ) ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹರಿಯಾಣ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡದ ಪರ ತೋಮರ್ 129 ಎಸೆತಗಳಲ್ಲಿ ಹತ್ತು ಬೌಂಡರಿ ಮತ್ತು ಎರಡು ಸಿಕ್ಸರ್ ಗಳೊಂದಿಗೆ 106 ರನ್ ಗಳಿಸಲು ಸಾಧ್ಯವಾಯಿತು. ಅಂತಿಮವಾಗಿ ರಾಜಸ್ಥಾನ್ 48 ಓವರ್ಗಳಲ್ಲಿ 257 ರನ್ಗಳಿಗೆ ಆಲೌಟ್ ಆಯಿತು.
ಈ ಮೂಲಕ ಹರಿಯಾಣ ತಂಡ ಟೂರ್ನಿಯ ಇತಿಹಾಸದಲ್ಲಿ ಚೊಚ್ಚಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.