ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹದೇವಪ್ಪ ಅವರ ಮನೆಯಲ್ಲಿ ನಡೆದ ಔತಣಕೂಟದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ನಾವು ಊಟಕ್ಕೆ ಹೋದೆವು, ಯಾವುದೇ ಸಭೆ ಇಲ್ಲ, ಕೇವಲ ರಾತ್ರಿಯ ಊಟ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಅವರು ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ಸ್ಪಷ್ಟನೆ ನೀಡಿದ್ದಾರೆ.