ಮಹಾರಾಷ್ಟ್ರ, ಜಾರ್ಖಂಡ್‌ನಲ್ಲೂ ಮರುಕಳಿಸಲಿದೆ ಹರಿಯಾಣ ಫಲಿತಾಂಶ: ಚಂದ್ರಬಾಬು ನಾಯ್ಡು

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹರಿಯಾಣ ಫಲಿತಾಂಶಗಳನ್ನು ಪುನರಾವರ್ತಿಸಲಿವೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.

ಬಿಜೆಪಿ ಮಿತ್ರ ಪಕ್ಷವಾಗಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದ್ದು ಮಾತ್ರವಲ್ಲದೆ, ಅಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದಿದ್ದಾರೆ.

‘ಹರಿಯಾಣದಲ್ಲಿ ಐತಿಹಾಸಿಕ ಚುನಾವಣಾ ಗೆಲುವು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉತ್ತಮ ಸಾಧನೆಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ನಂಬಿಕೆಎಗ ಅರ್ಹನಾದ ನಾಯಕ ಉತ್ತಮವಾಗಿ ಕಾರ್ಯ ನಿರ್ವಹಿಸಿದಾಗಲೆಲ್ಲಾ ಜನರು ಅವರನ್ನು ಬೆಂಬಲಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಇದು ಹರಿಯಾಣದಲ್ಲಿ ಮಾತ್ರವಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಸಾಬೀತಾಗಿದೆ. ವೋಟ್ ಪರ್ಸೆಂಟೇಜ್ ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಜಮ್ಮು ಕಾಶ್ಮೀರದಲ್ಲಿ ಹೊರಹೊಮ್ಮಿದೆ ಎಂದಿದ್ದಾರೆ.

ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂತಿರುಗಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಆಗಾಗ ನಡೆಯುವ ಚುನಾವಣೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವುದರಿಂದ ಭಾರತವು ‘ಒಂದು ರಾಷ್ಟ್ರ ಒಂದು ಚುನಾವಣೆ’ ಅನ್ನು ಬೆಂಬಲಿಸುವ ಅಗತ್ಯವಿದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಶ್ಲಾಘಿಸಿದ ಚಂದ್ರಬಾಬು ನಾಯ್ಡು, ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದರು. “ಗೌರವಾನ್ವಿತ ಪ್ರಧಾನಿ ಅವರ ಅಸಾಮಾನ್ಯ ಕೆಲಸಕ್ಕಾಗಿ ನಾನು ಮನಃಪೂರ್ವಕವಾಗಿ ಪ್ರಶಂಸಿಸುತ್ತೇನೆ” ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!