March 18, 2026
Wednesday, March 18, 2026
spot_img

ರಾಜ್ಯದಲ್ಲಿ ಇವಿಎಂ ಬಳಕೆ ಕುರಿತು ಸಮೀಕ್ಷೆ ನಡೆಸಲಾಗಿದೆಯೇ? ಚುನಾವಣಾ ಆಯೋಗ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು, ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌. ಆದ್ರೆ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ನಡೆಸಿದ ಸಮೀಕ್ಷೆಯಲ್ಲಿ ಶೇ. 85 ರಷ್ಟು ಮಂದಿ ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !