Thursday, November 20, 2025

ರಾಜ್ಯದಲ್ಲಿ ಎಲ್ಲರ ಬಿಪಿಎಲ್ ಕಾರ್ಡ್ ಕೂಡ ರದ್ದು? ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು.

ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು.

error: Content is protected !!