March 12, 2026
Thursday, March 12, 2026
spot_img

ರಕ್ತಸಂಬಂಧಕ್ಕಿಂತ ಆಸ್ತಿಯೇ ದೊಡ್ಡದಾಯಿತೇ? ಸಾರಿಗೆ ನೌಕರನ ಭೀಕರ ಹ*ತ್ಯೆ, 10 ಮಂದಿ ವಿರುದ್ಧ FIR!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ತಿ ವಿಚಾರಕ್ಕಾಗಿ ನಡೆದ ಭೀಕರ ಘಟನೆಯೊಂದರಲ್ಲಿ ಸಾರಿಗೆ ಇಲಾಖೆಯ ನೌಕರ ವೀರಪ್ಪ ಅವರನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವೀರಪ್ಪ ಅವರ ಮೃತದೇಹವು ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಪೂರ್ವಯೋಜಿತ ಕೃತ್ಯವೋ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಪುತ್ರ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ವಿವೇಕ್ ಅವರು ನೀಡಿದ ದೂರಿನ ಮೇರೆಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹತ್ಯೆ ಪ್ರಕರಣದಲ್ಲಿ ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ ಹಾಗೂ ಸ್ವಾಮಿ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಸ್ತಿ ಹಂಚಿಕೆಯ ವಿಚಾರದಲ್ಲಿ ದೀರ್ಘಕಾಲದಿಂದ ಇದ್ದ ಕಿತ್ತಾಟವೇ ಈ ಭೀಕರ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿರುವ ಆಲೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಶವವು ಸುಟ್ಟು ಹೋಗಿರುವುದರಿಂದ ವೈಜ್ಞಾನಿಕ ಸಾಕ್ಷ್ಯಗಳ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !