August 24, 2026
Monday, August 24, 2026
spot_img

ಡಿಎಂಕೆ ಭದ್ರಕೋಟೆ ನಡುಗಿದೆಯೇ? ತಂದೆ-ಮಗನಿಗೆ ಆರಂಭಿಕ ಸುತ್ತಿನಲ್ಲಿ ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶದ ಆರಂಭಿಕ ಟ್ರೆಂಡ್‌ಗಳು ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಭಾರಿ ಆಘಾತ ನೀಡುತ್ತಿವೆ. ಸ್ವತಃ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಕೇವಲ ಮುಖ್ಯಮಂತ್ರಿಯಷ್ಟೇ ಅಲ್ಲದೆ, ಅವರ ಪುತ್ರ ಹಾಗೂ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದಲ್ಲಿ ಹಿನ್ನಡೆ ಕಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಡಿಎಂಕೆಯ ಪ್ರಬಲ ನಾಯಕರೇ ಹಿನ್ನಡೆ ಅನುಭವಿಸುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದ್ದರೆ, ವಿರೋಧ ಪಕ್ಷಗಳಲ್ಲಿ ಉತ್ಸಾಹ ತಂದಿದೆ. ನಟ ವಿಜಯ್ ಅವರ ಟಿವಿಕೆ ಪಕ್ಷವು ರಾಜ್ಯಾದ್ಯಂತ ಗಮನಾರ್ಹ ಮುನ್ನಡೆ ಸಾಧಿಸುತ್ತಿರುವುದು ಈ ಬಾರಿಯ ಚುನಾವಣಾ ಕಣದಲ್ಲಿ ಹೊಸ ಟ್ವಿಸ್ಟ್ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !