ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ಗೆ ಸಂಬಂಧಿಸಿದಂತೆ ಮಹತ್ವದ ಕ್ಲೂ ಲಭ್ಯವಾಗಿದೆ. ಶಂಕಿತ ಉಗ್ರ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದ್ದು, ಎನ್ಐಎ ತೀವ್ರ ಶೋಧ ನಡೆಸುತ್ತಿದೆ.
ಬೆಂಗಳೂರಿನ ಸುಜಾತ ಸರ್ಕಲ್ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿಗೆ ಬಂದಿದ್ದಾನೆ. ಅಲ್ಲಿಂದ ಮತ್ತೆ ಬಳ್ಳಾರಿಗೆ ಬಂದಿದ್ದಾನೆ, ಅಲ್ಲಿಂದ ಮಂತ್ರಾಲಯ-ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ತನಿಖಾ ದಳ ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ.