Monday, November 3, 2025

ಇಂದು ಹಾಸನಾಂಬೆ ದೇವಿಯ ಗರ್ಭಗುಡಿ ಬಂದ್‌: ಕಡೆಯ ಕ್ಷಣದವರೆಗೂ ಭಕ್ತಸಾಗರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವರ್ಷಕ್ಕೊಮ್ಮೆ ಮಾತ್ರ ದರುಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ.

ಈಗಾಗಲೇ ಹಾಸನಾಂಬ ದೇವಿ ಸಾರ್ವಜನಿಕ ದರುಶನ ಅಂತ್ಯಗೊಂಡಿದ್ದು, ಪೂಜೆಗಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಕಡೆಗಳಿಗೆಯಲ್ಲೂ ಭಕ್ತಗಣ ಹಾಸನಾಂಬ ದೇವಿಯನ್ನು ಕಣ್ತುಂಬಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಬಾಗಿಲು ಮುಚ್ಚುವ ಮುನ್ನ ಅರ್ಚಕರು ದೀಪ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಡಲಿದ್ದಾರೆ. ಅನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.

error: Content is protected !!