ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಹಾಸನಾಂಬ ದೇವಾಲಯ ವರ್ಷಕ್ಕೆ ಒಮ್ಮೆ ಮಾತ್ರ ದೀಪಾವಳಿಯಂದು ತೆರೆದು, ಭಕ್ತರ ದರುಶನಕ್ಕೆ ಅವಕಾಶ ಮಾಡಿ ಕೊಡಲಾಗುತ್ತದೆ. ಇದೀಗ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದಿನ ನಿಗದಿಯಾಗಿದ್ದು, ನವೆಂಬರ್ 2ರಿಂದ 15ರವರೆಗೆ ದೇವಸ್ಥಾನದ ಬಾಗಿಲು ತೆರೆಯಲಿದೆ.
ಈ ಬಗ್ಗೆ ಮಂಗಳವಾರ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಹಾಸನಾಂಬೆ ಮಹೋತ್ಸವದ ಪೂರ್ವಭಾವಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನವೆಂಬರ್ 2ರಿಂದ 15ರವೆರೆಗ ಹಾಸನಾಂಬೆ ಮಹೋತ್ಸವ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಹಾಸನಾಂಬ ತಾಯಿಯ ದರುಶನಕ್ಕೆ ಭಕ್ತರಿಗೆ 24 ಗಂಟೆ ಅವಕಾಶ ಮಾಡಿಕೊಡುವಂತ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ದಿನ, ಅಂತಿಮ ದಿನದಂದು ಸಾರ್ವಜನಿಕರ ದರುಶನಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸಭೆಯಲ್ಲಿ ತಿಳಿಸಲಾಯಿತು. ಶಕ್ತಿ ಯೋಜನೆಯ ಹಿನ್ನಲೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಎಲ್ಲಾ ರೀತಿಯ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.