Sunday, December 10, 2023

Latest Posts

ಇಂದಿನಿಂದ ಹಾಸನಾಂಬೆ ದರುಶನ ಆರಂಭ, ಸಂಪೂರ್ಣ ಮಾಹಿತಿ ಇಲ್ಲಿದೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರ್ಷಕ್ಕೊಮ್ಮೆ ದರುಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನೋತ್ಸವ ಇಂದಿನಿಂದ ಆರಂಭವಾಗಿದೆ.

ಕಳೆದ ವರ್ಷ ದೇಗುಲದ ಬಾಗಿಲು ಮುಚ್ಚಿದ್ದು, ಇದೀಗ ವರ್ಷದ ನಂತರ ಬಾಗಿಲನ್ನು ತೆರೆಯಲಾಗಿದೆ, ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ತಾಯಿ ಹಾಸನಾಂಬೆ ದರುಶನಕ್ಕೆ ಭಕ್ತರ ಕಾತರರಾಗಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ದೇವಿ ದೇಗುಲದ ಬಾಗಿಲು ತೆರೆಯಲಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತದೆ, ನಾಳೆಯಿಂದ ಭಕ್ತರಿಗೆ ದೇವಿ ದರುಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಇಂದಿನಿಂದ ನವೆಂಬರ್ 15 ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಸನಾಂಬೆ ದರ್ಶನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಸ್ತೆಗಳ ದುರಸ್ತಿ, ಸ್ವಚ್ಛತೆ, ನೀರು, ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!