ಹಾಸನಾಂಬೆ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭ, ದಾಖಲೆಯ ಆದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರ್ಷಕ್ಕೆ ಒಮ್ಮೆ ದರುಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿದ್ಯುಕ್ತ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಹಾಸನಾಂಬೆ ದೇವಸ್ಥಾನದ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ ದೇವಾಲಯದ ಆವರಣ ಭಕ್ತರಿಂದ ತುಂಬಿ ತುಳುಕುತ್ತಿದೆ.

​​ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಶಾಸಕ ಸ್ವರೂಪ್‌, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್​​ಪಿ ಮೊಹಮ್ಮದ್​ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.

ಅಕ್ಟೋಬರ್ 25 ರಿಂದ ನವೆಂಬರ್ 3 ರವರೆಗೆ 9 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರುಶನ ಪಡೆದಿದ್ದಾರೆ ಎಂದು ವರದಿಯಾಗಿದೆ. ದೇವಸ್ಥಾನಕ್ಕೆ ಈ ಬಾರಿ 9 ಕೋಟಿಗಿಂತ ಹೆಚ್ಚು ದಾಖಲೆಯ ಆದಾಯ ಬಂದಿದೆ ಎನ್ನಲಾಗಿದೆ.

ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಹಲವು ಭಕ್ತರು ದೇವಿಯ ದರುಶನ ಪಡೆದರು. ದರ್ಶನದ ಕೊನೆಯ ದಿನವಾದ ಶನಿವಾರ ಹಲವು ಶಾಸಕರು, ಮಾಜಿ ಸಚಿವರುಗಳು ಹಾಗೂ ಅಧಿಕಾರಿಗಳು ದೇವಿ ದರುಶನ ಪಡೆದಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!