ಹಾಸನಾಂಬೆ ಹುಂಡಿ ಎಣಿಕೆ: ಈ ಬಾರಿ ಬರೋಬ್ಬರಿ 12 ಕೋಟಿಗೂ ಹೆಚ್ಚು ಆದಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವ ಹೊಸ ಇತಿಹಾಸ ಬರೆದಿದೆ. ವಿಶೇಷ ದರುಶನದ ಟಿಕೆ‌ಟ್ ಲಾಡು ಮಾರಾಟದಿಂದ ಈ ಬಾರಿ ದಾಖಲೆ ಆದಾಯ ಗಳಿಕೆಯಾಗಿದೆ.

11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ ದೇವಿ ದರುಶನ ಪಡೆದುಕೊಂಡಿದ್ದಾರೆ.

ಹುಂಡಿ ಹಣ ಬಿಟ್ಟು ಕೇವಲ ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ 9.69 ಕೋಟಿಯಷ್ಟು ಆದಾಯ ಸಂಗ್ರಹವಾಗಿದ್ದರೆ, ಹುಂಡಿ ಕಾಣಿಕೆಯನ್ನು ಸೇರಿಸಿದರೆ 12,63,83,808 ಆದಾಯ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದ ಆದಾಯ ಹಾಸನಾಂಬೆ ದರುಶನದ ಇತಿಹಾಸದಲ್ಲೇ ದಾಖಲೆಯಾಗಿದೆ.

ಇಂದು (ನವೆಂಬರ್ 04) 500 ಜನರಿಂದ 7 ಗಂಟೆಗಳ ಕಾಲ ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರುಶನ ವೇಳೆ 12,63,83,808 ರೂ. ಕಾಣಿಕೆ ಸಂಗ್ರವಾಗಿದೆ. ಇನ್ನು 1000, 300 ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 9,67,27,180 ರೂಪಾಯಿ ಹಾಗೂ ದೇವಸ್ಥಾನದ ಹುಂಡಿಯಲ್ಲಿ 2,55,97,567 ರೂ. ಸೇರಿಕೊಂಡು 2024ರ ಹಾಸನಾಂಬೆ ದರ್ಶನೋತ್ಸವದಿಂದ ಒಟ್ಟು 12,63,83,808 ರೂಪಾಯಿ ಆದಾಯ ಬಂದಿದೆ. ಇದರ ಜೊತೆಗೆ 51 ಗ್ರಾಂ ಚಿನ್ನ ಹಾಗೂ 913 ಗ್ರಾಂ ಬೆಳ್ಳಿ ಕಾಣಿಕೆಯಾಗಿದೆ ಬಂದಿದೆ. ಹಾಸನಾಂಬೆ ದರ್ಶನದ ಇತಿಹಾಸದಲ್ಲೇ ಹರಿದುಬಂದ ದಾಖಲೆಯ ಆದಾಯ ಇದಾಗಿದೆ.

ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕ ಭಕ್ತರು ಆಗಮಿಸಿದ್ದರಿಂದ ದರ್ಶನ ವ್ಯವಸ್ಥೆಯಲ್ಲಿ ಕೊಂಚ ಅಸ್ತವ್ಯಸ್ಥವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೇ ದೇವಿ ದರುಶನಕ್ಕೆ ಬಂದಿದ್ದ ಭಕ್ತರು ಪರದಾಡಿದರು ಜಿಲ್ಲಾಡಳಿತ ವಿರುದ್ಧ ಆರೋಪಗಳು ಕೇಳಿಬರುತ್ತಲ್ಲೇ ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಿ ಸುಗಮ ದರುಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆಗ ಕೊಂಚ ಪರಿಸ್ಥಿತಿ ಸುಧಾರಣೆಯಾಯ್ತು.

ಈ ವರ್ಷದ ಹಾಸನಾಂಬೆಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ. ಮುಂದಿನ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಅಂದ್ರೆ 15 ದಿನಗಳ ಕಾಲ ಹಾಸನಾಂಬೆ ಉತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!