ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ.
ನವೆಂಬರ್ 2ರಿಂದ ಜಾತ್ರೆ ಆರಂಭವಾಗಲಿದ್ದು, 14 ದಿನಗಳು ನಡೆಯಲಿದೆ. 24 ಗಂಟೆಯೂ ದೇವಿ ದರುಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ಮೂರು ವರ್ಷದಿಂದ ಕೊರೋನಾ ಕಾರಣದಿಂದಾಗಿ ಅದ್ಧೂರಿಯಾಗಿ ಹಾಸನಾಂಬೆ ಜಾತ್ರೆ ಮಾಡಲಾಗಿರಲಿಲ್ಲ. ಆದರೆ ಈ ಬಾರಿ ಅದ್ಧೂರಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ನಡೆದಿವೆ.
ಸಿದ್ದರಾಮಯ್ಯ ಸರ್ಕಾರದಿಂದ ಶಕ್ತಿ ಯೋಜನೆಗೆ ಚಾಲನೆ ಸಿಕ್ಕಿದ್ದು, ಪ್ರೇಕ್ಷಣೀಯ ಸ್ಥಳಗಳಲ್ಲಿ ಮಹಿಳೆಯರೇ ಹೆಚ್ಚಾಗಿದ್ದಾರೆ. ಅದರಲ್ಲಿಯೂ ಫ್ರೀ ಬಸ್ ಹತ್ತಿ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಬಾರಿಯೂ ಹಾಸನಾಂಬಾ ತಾಯಿ ಜಾತ್ರೆಗೆ ಸಾಕಷ್ಟು ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.