Saturday, December 9, 2023

Latest Posts

ಹಾಸನಾಂಬೆ ಮಹೋತ್ಸವ: ಉಸ್ತುವಾರಿ ಸಚಿವರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಹೊಸದಿಗಂತ ವರದಿ,ಹಾಸನ:

ಪ್ರತಿ ವರ್ಷ ಆಶ್ವಿಜ ಮಾಸದಲ್ಲಿ ಭಕ್ತರ ದರ್ಶನಕ್ಕಾಗಿ ಬಾಗಿಲು ತೆರೆಯುವ ಇತಿಹಾಸ ಪ್ರಸಿದ್ದ ಹಾಸನಾಂಬೆ ದೇವಾಲಯದ ಪ್ರಾರಂಭೋತ್ಸವಕ್ಕೆ ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರನ್ನು ಹಾಸನ ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.

ನ. ೨ ರಿಂದ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಿದ್ದು, ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣನವರ ತುಮಕೂರಿನ ನಿವಾಸಕ್ಕೆ ಹಾಸನ ಉಪವಿಭಾಗಾಧಿಕಾರಿ ಮಾರುತಿಗೌಡ ಅವರು ತೆರಳಿ ಸಚಿವ ರಾಜಣ್ಣ ಮತ್ತು ಶಾಂತಲಾರಾಜಣ್ಣ ದಂಪತಿಗಳನ್ನು ಹಾಸನಾಂಬೆ ದೇವಾಲಯ ಪೂಜಾ ವಿಧಿ ವಿಧಾನಗಳ ಪ್ರಾರಂಭೋತ್ಸವಕ್ಕೆ ಅಧಿಕೃತವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!