October 9, 2026
Friday, October 9, 2026
spot_img

ದೇಶ ಸೇವೆಯಲ್ಲಿದ್ದ ಹಾಸನದ ಬಿಎಸ್‌ಎಫ್ ಯೋಧ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

ಹೊಸದಿಗಂತ ವರದಿ ಹಾಸನ:

ಜಿಲ್ಲೆಯ ಆಲೂರು ತಾಲ್ಲೂಕಿನ ಹಾಂಜಿಹಳ್ಳಿ ಗ್ರಾಮದ ಬಿಎಸ್‌ಎಫ್ ಯೋಧ ಮಧು ಹೆಚ್.ಹೆಚ್. (ಮಧು) ಅವರು ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅನಾರೋಗ್ಯದಿಂದ ಸೆ.10ರಂದು ಗುರುವಾರ ಸಂಜೆ ಕ್ಯಾಂಪ್‌ನಲ್ಲಿಯೇ ನಿಧನರಾಗಿದ್ದಾರೆ.

ಇದನ್ನೂ ಓದಿ:

ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಸುಮಾರು 15 ವರ್ಷಗಳ ಕಾಲ ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದ ಮಧು ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗುತ್ತಿದೆ. ಸೆ.11ರಂದು ಶುಕ್ರವಾರ ಸಂಜೆ ಹಾಂಜಿಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮಧು ಅವರ ನಿಧನಕ್ಕೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Must Read