ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ನೇ ಸಾಲಿನ ಬಜೆಟ್ ನಲ್ಲಿ ಹಾಸನ ಜಿಲ್ಲೆಗೆ ಮಾತ್ರ ಯಾವುದೇ ಅನುದಾನ ನೀಡಿಲ್ಲ. ಜನತೆಗೆ ಮತ್ತೊಮ್ಮೆ ನಿರಾಸೆಯಾಗಿದೆ ಎಂದು ಎಚ್.ಡಿ.ರೇವಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಐದು ಗ್ಯಾರೆಂಟಿಗಳನ್ನು ಮುಂದುವರೆಸಿದ್ದಾರೆ. ಬಜೆಟ್‌ನಲ್ಲಿ ಹಾಸನ ಜಿಲ್ಲೆಯೇ ಇಲ್ಲ. ನಮ್ಮ ಜಿಲ್ಲೆಗೆ ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ ಗ್ಯಾರಂಟಿ ಕೊಟ್ಟಿದ್ದಾರೆ. ಹೀಗಾಗಿ ನಾವು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ವ್ಯಂಗ್ಯ ಮಾಡಿದ್ದಾರೆ.
ಹಾಸನ ನಗರದ ಅಲ್ಪಸಂಖ್ಯಾತರು ವಾಸಿಸುವ ಸ್ಥಳಗಳಲ್ಲಿ ರಸ್ತೆ ನಿರ್ಮಾಣ ಮಾಡಲು ಹಣವನ್ನಾದರೂ ನೀಡಬಹುದಿತ್ತು. ಅಲ್ಪಸಂಖ್ಯಾತರಿಗೆ ಒಂದು ಸಾವಿರ ವಸತಿ ನೀಡಬಹುದಿತ್ತು. ತೋಟಗಾರಿಕೆ ಕಾಲೇಜು ಮಂಜೂರು ಮಾಡ್ತಾರೆ ಎನ್ನುವ ನಿರೀಕ್ಷೆ ಇತ್ತು. ಫ್ಲೈಓವರ್‌ಗೆ ದುಡ್ಡು ಕೊಡ್ತಾರೆ ಎಂದು ಭಾವಿಸಿದ್ದೆವು ಆದರೆ ಯಾವುದು ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು.