ಹಾಸನದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ರೋಗಿಗಳು ಪ್ರಾಣಾಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಶಂಕ್ರಮಟ್ಟ ರಸ್ತೆಯಲ್ಲಿರುವ ಮಂಜುನಾಥ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಆಸ್ಪತ್ರೆಯ ಎಕ್ಸ್ ರೇ ಕೊಠಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಸಿಬ್ಬಂದಿಗಳು ಪ್ರಾಣ ರಕ್ಷಿಸಿಕೊಂಡಿದ್ದಾರೆ.

ರೋಗಿಗಳನ್ನು ತಕ್ಷಣವೇ ಆಸ್ಪತ್ರೆಯಿಂದ ಹೊರ ತರಲಾಗಿದೆ. ಬೆಂಕಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!