ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಣ ಸಂಬಂಧ ವಕೀಲ ದೇವರಾಜೇಗೌಡ ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಎರಡು ದಿನಗಳ ಹಿಂದೆ ಹಾಸನದ 5 ನೇ ಸಿವಿಲ್ ಕೋರ್ಟ್ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದರು.
ಪೆನ್ ಡ್ರೈವ್ ಕೇಸ್ ನಲ್ಲಿ ದೇವರಾಜೇಗೌಡ ಎಂಟನೇ ಆರೋಪಿಯಾಗಿದ್ದಾರೆ. ಮತ್ತೆ 2 ದಿನ SIT ಕಸ್ಟಡಿಗೆ ನೀಡಿ ಮೇ 20ರ ಸಂಜೆ 5 ಗಂಟೆಗೆ ಕೋರ್ಟಿಗೆ ಹಾಜರುಪಡಿಸುವಂತೆ ಕೋರ್ಟ್ ಆದೇಶಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ನನ್ನು ಒಂದು ದಿನ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ ಕರೆತಂದಿದ್ದರು. ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.