Saturday, September 13, 2025

ಹಾಸನ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಶಿವಯ್ಯನ ಕೊಪ್ಪಲು ಗ್ರಾಮದ‌ ಯುವಕ ಚಂದನ್ (26) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಕ್ಯಾಂಟರ್ ಹರಿದು 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ