JOB| ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 13 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 13 ತಜ್ಞ ವೈದ್ಯರು, ಔಷಧಿ ವಿತರಕರು, ಮಸಾಜಿಸ್ಟ್‌, ಮಲ್ಟಿಪರ್ಪಸ್‌ ವರ್ಕರ್‌ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿಎಎಂಎಸ್‌, ಎಂ.ಎಸ್‌, ಎಂ.ಡಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, 7ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್‌ 28,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 52,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಡಿಸೆಂಬರ್‌ 28,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!