ಹೊಸದಿಗಂತ ಡಿಜಿಟಲ್ ಡೆಸ್ಕ್:
ಅ.9ರಿಂದ ಅ. 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಹಾಸನಾಂಬಾ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಹಾಸನಾಂಬಾ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಲಾಗುವುದು. ಅಲ್ಲದೇ ಜನಸ್ನೇಹಿ ಹಾಸನಾಂಬಾ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದುಎಂದು ಎಂದರು.