ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27 ರ ವರೆಗೆ ನಡೆಯಲಿದೆ.
ಈ ಬಾರಿ ದೇವಿಯ ದರುಶನಕ್ಕೆ 15 ದಿನ ಅವಕಾಶ ಮಾಡಿಕೊಡಲಾಗಿದೆ. ಕೊರೋನಾ ಕಾರಣದಿಂದ ಕಳೆದು ಎರಡು ವರ್ಷಗಳಿಂದ ಸರಳವಾಗಿ ಆಚರಿಸಲಾಗಿದ್ದ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಪ್ರೀತಂಗೌಡ ತಿಳಿಸಿದ್ದಾರೆ.
ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನದಂದು ಸಾರ್ವಜನಿಕರಿಗೆ ದೇವಿಯ ದರುಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!