ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ 153 ಸಾಕ್ಷಿಗಳೊಂದಿಗೆ 2,360 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 10 ಲಕ್ಷ ದಂಡವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿಧಿಸಿ ಮಹತ್ವದ ತೀರ್ಪು ನೀಡಲಾಗಿತ್ತು.
ಈ ಬೆನ್ನಲ್ಲೇ ಪ್ರಜ್ವಲ್ ಮತ್ತು ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರದ ಸಂಬಂಧ ತನಿಖೆ ನಡೆಸಿರುವ ಸಿಐಡಿ ಪೊಲೀಸರು 153 ಸಾಕ್ಷಿಗಳೊಂದಿಗೆ 2,360 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಇದಲ್ಲದೇ ಬೆಂಗಳೂರಿನ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ 74 ಸಾಕ್ಷಿಗಳ ಜೊತೆಗೆ 681 ಪುಟಗಳ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ.