July 29, 2026
Wednesday, July 29, 2026
spot_img

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು: ಕೇರಳ, ತಮಿಳುನಾಡು ಕಥೆ ಏನು? ಟುಡೇಸ್‌ ಚಾಣಕ್ಯನ ಸಮೀಕ್ಷೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚ ರಾಜ್ಯ ಚುನಾವಣೆಯ ಮತದಾನ ನಡೆದ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದ್ದು, ಅದರಲ್ಲೂ ಬಂಗಾಳ, ಅಸ್ಸಾಂ ಹಾಗೂ ಪುದಚೇರಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಗಲಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕೇರಳದಲ್ಲಿ ಯುಡಿಎಫ್ ಹಾಗೂ ತಮಿಳುನಾಡಿನಲ್ಲಿ ಮತ್ತೆ ಡಿಎಂಕೆ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿದೆ.

ಇದೀಗ ಚುನಾವಣೋತ್ತರ ಸಮೀಕ್ಷೆಯಲ್ಲಿ ಹೆಚ್ಚಾಗಿ ನಿಖರತೆಯಿಂದ ಭವಿಷ್ಯ ನೀಡುವ ಟುಡೇಸ್‌ ಚಾಣಕ್ಯ ಕೂಡ ಸಮೀಕ್ಷೆ ವರದಿ ನೀಡಿದ್ದು, ಅಸ್ಸಾಂನದಲ್ಲಿ ಈ ಬಾರಿ ಆಡಳಿತಾರೂಢ ಎನ್‌ಡಿಎ ಮತ್ತೆ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ಈ ಬಾರಿ ಎನ್‌ಡಿಎ ಮೈತ್ರಿಕೂಟ ೧೦೯+೨ ಸ್ಥಾನಗಳೊಂದಿಗೆ ಹ್ಯಾಟ್ರಿಕ್‌ ಸಾಧನೆ ಮಾಡಲಿದೆ. ಕಾಂಗ್ರೆಸ್ ಮೈತ್ರಿಯು 323 + 9 ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿ ಅಂದಾಜಿಸಲಾಗಿದೆ. ಇತರರು1 + 1 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ಕೇರಳ
ಕೇರಳಂದಲ್ಲಿ ಈ ಬಾರಿ ಸಿಎಂ ಪಿಣರಾಯಿ ವಿಜಯನ್‌ ಅವರ ಹ್ಯಾಟ್ರಿಕ್‌ ಸಾಧನೆ ಕನಸು ಭಗ್ನವಾಗಲಿದೆ. ಕಾಂಗ್ರೆಸ್‌ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಧಿಕಾರಕ್ಕೆ ಏರಲಿದೆ ಎಂದು ಟುಡೇಸ್‌ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ತಿಳಿಸಿದೆ. ಯುಡಿಎಫ್ 69 + 9 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಎಲ್‌ಡಿಎಫ್ 64 + 9 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು. ಬಿಜೆಪಿ 7 + 4 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಗಳಿವೆ ಎಂದು ಸಮೀಕ್ಷೆ ಹೇಳಿದೆ.

ತಮಿಳುನಾಡು
ತಮಿಳುನಾಡಿನಲ್ಲಿ ಮತ್ತೆ ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಟುಡೇಸ್‌ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ನೀಡಿದೆ. ಇನ್ನೂ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಉತ್ತಮ ಸ್ಥಾನ ಗಳಿಸುವ ಸಾಧ್ಯತೆಯಿದೆ ಎಂದು ಹೇಳಿದೆ. ಡಿಎಂಕೆ ಮೈತ್ರಿಕೂಟ 125 + 11 ಸ್ಥಾನ ಗೆದ್ದರೆ, ಎಐಎಡಿಎಂಕೆ ಮೈತ್ರಿಕೂಟ 45 + 11 ಸ್ಥಾನ ಗಳಿಸಬಹುದು. ಟಿವಿಕೆ 63 + 11 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ .

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !