2019 ರ ದ್ವೇಷ ಭಾಷಣ ಪ್ರಕರಣ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ದೋಷಿಯೆಂದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿ ಎಂದು ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯ ತೀರ್ಪು ನೀಡಿದೆ. ಇಂದು ಮಧ್ಯಾಹ್ನ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮೂಲಗಳು ವರದಿ ಮಾಡಿವೆ.

2019 ರಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧದ ಹೇಳಿಕೆಗಳ ಕುರಿತು ಅಜಂ ಖಾನ್ ವಿರುದ್ಧ ದ್ವೇಷ ಭಾಷಣದ ಪ್ರಕರಣವನ್ನು ದಾಖಲಿಸಲಾಗಿತ್ತು.

ನೋಂದಾಯಿತ ಸೆಕ್ಷನ್‌ಗಳ ಪ್ರಕಾರ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶವಿದೆ. ಅಜಂ ಖಾನ್‌ಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆ ವಿಧಿಸಿದರೆ, ಅವರು ರಾಜ್ಯ ವಿಧಾನಸಭೆಯ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ ಎನ್ನಲಾಗಿದೆ.

ಸಮಾಜವಾದಿ ನಾಯಕರಾಗಿರುವ ಆಜಂ ಖಾನ್ ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ ಸುಮಾರು 90 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಈ ವರ್ಷದ ಆರಂಭದಲ್ಲಿ, ಆಪಾದಿತ ವಂಚನೆ ಪ್ರಕರಣದಲ್ಲಿ ಅವರಿಗೆ ಭಾರತದ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!