ಹೊಸದಿಗಂತ ಡಿಜಿಟಲ್ ಡೆಸ್ಕ್;
ಆರ್‌ಎಸ್‌ಎಸ್ ಮುಖಂಡ ಡಾ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಭಾಕರ್ ಭಟ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಈ ತೀರ್ಪು ನೀಡಿದೆ.
ಪ್ರಭಾಕರ್ ಭಟ್ ಅವರು ಉಪ್ಪಳಿಗೆಯಲ್ಲಿ ಅ.೨೦ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದಾಖಲಾಗಿತ್ತು.
ಎಲ್ಲಾ ವಾದ-ಪ್ರತಿವಾದಗಳನ್ನು ಆಲಿಸಿದ ಪುತ್ತೂರು ನ್ಯಾಯಾಲಯವು ಅಂತಿಮವಾಗಿ ಡಾ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಡಾ. ಪ್ರಭಾಕರ್ ಭಟ್ ಪರವಾಗಿ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆ ವಾದಿಸಿದ್ದರು.

