March 15, 2026
Sunday, March 15, 2026
spot_img

ದ್ವೇಷ ಭಾಷಣ ಕೇಸ್: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದ್ವೇಷದ ಮಾತುಗಳನ್ನಾಡಿದ ಸಂಬಂಧ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ‘ಪ್ರಭಾಕರ್‌ಭಟ್‌ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಸಂಬಂಧಿತ ಪ್ರಕರಣದಲ್ಲಿ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ನೋಟಿಸ್‌ ನೀಡಿ, ಆರೋಪಿಯನ್ನು ಆಲಿಸದ ಹೊರತು ಬಂಧಿಸುವಂತಿಲ್ಲ ಎಂದು ತೆಲಂಗಾಣ ಹೈಕೋರ್ಟ್‌ ರೂಪಿಸಿರುವ ಮಾರ್ಗಸೂಚಿಗಳನ್ನು ಇತ್ತೀಚೆಗೆ ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಹಾಲಿ ಪ್ರಕರಣದಲ್ಲಿ ಈ ಪ್ರಕ್ರಿಯೆ ಪಾಲಿಸಿಲ್ಲ. ಸತ್ಯೇಂದರ್‌ ಕುಮಾರ್‌ ಆಂಟಿಲ್‌ ಪ್ರಕರಣದ ತೀರ್ಪು ಆಧರಿಸಿ, ಪ್ರಭಾಕರ್‌ ಭಟ್‌ ವಿರುದ್ಧದ ಎಲ್ಲಾ ತನಿಖೆ ಮತ್ತು ಪ್ರಕ್ರಿಯೆಗೆ ತಡೆ ನೀಡಲಾಗಿದೆ’ ಎಂದು ಆದೇಶಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !