ದ್ವೇಷ ಭಾಷಣದ ಆರೋಪ ಸಾಬೀತು: ಯುಪಿ ವಿಧಾನಸಭೆಯ ಸದಸ್ಯತ್ವದಿಂದ SP ನಾಯಕ ಅಜಂ ಖಾನ್ ಅನರ್ಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ 2019 ರ ದ್ವೇಷ ಭಾಷಣಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಒಂದು ದಿನದ ನಂತರ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ರಾಂಪುರ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

2013 ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಒಬ್ಬ ಶಾಸಕ, ಎಂಎಲ್ಸಿ ಅಥವಾ ಸಂಸದ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದರೆ ಮತ್ತು ಕನಿಷ್ಠ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಗೊಳಗಾದರೆ, ಅವನು / ಅವಳು ತಕ್ಷಣದಿಂದ ಜಾರಿಗೆ ಬರುವಂತೆ ಸದನದ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಅಜಂ ಖಾನ್‌ ಈಗ ತಪ್ಪಿತಸ್ಥರಾಗಿರುವ ಕಾರಣ ರಾಂಪುರ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಅಜಂ ಖಾನ್ 2019 ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಜಯಿಸಿದ್ದರು. ಆದರೆ ಮಾರ್ಚ್ 2022 ರಲ್ಲಿ ಯುಪಿ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ಅವರು ಈ ಸ್ಥಾನವನ್ನು ತೆರವು ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!